العلق
The Clot • 19 ayahs • Meccan
بِسْمِ ٱللَّهِ ٱلرَّحْمَٰنِ ٱلرَّحِيمِ
1ಸೃಷ್ಟಿಸಿದ ನಿಮ್ಮ ಪರಿಪಾಲಕನ (ಅಲ್ಲಾಹನ) ಹೆಸರಿನಿಂದ ಓದಿರಿ.
2ಅವನು ಮನುಷ್ಯನನ್ನು ರಕ್ತಪಿಂಡದಿಂದ ಸೃಷ್ಟಿಸಿದನು.
3ಓದಿರಿ. ನಿಮ್ಮ ಪರಿಪಾಲಕ (ಅಲ್ಲಾಹು) ಅತ್ಯುದಾರಿಯಾಗಿದ್ದಾನೆ.
4ಅವನು ಯಾರೆಂದರೆ ಲೇಖನಿಯ ಮೂಲಕ ಕಲಿಸಿದವನು.
5ಮನುಷ್ಯನಿಗೆ ತಿಳಿಯದೇ ಇರುವುದನ್ನು ಅವನು ಕಲಿಸಿದನು.[1]
6ನಿಸ್ಸಂದೇಹವಾಗಿಯೂ ಮನುಷ್ಯನು ಎಲ್ಲೆ ಮೀರಿ ನಡೆಯುತ್ತಾನೆ.
7ಅದೇಕೆಂದರೆ, ಅವನು ಅವನನ್ನೇ ಸ್ವಯಂ-ಪರ್ಯಾಪ್ತನಾಗಿ ಕಾಣುತ್ತಾನೆ.
8ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳಿ ಹೋಗಬೇಕಾಗಿದೆ.
9ತಡೆಯುವವನನ್ನು ನೀವು ನೋಡಿದ್ದೀರಾ?[1]
10ದಾಸನನ್ನು—ಅವನು ನಮಾಝ್ ಮಾಡುವಾಗ.
11ನೀವು ನೋಡಿದ್ದೀರಾ—ಒಂದು ವೇಳೆ ಅವನು (ದಾಸನು) ಸನ್ಮಾರ್ಗದಲ್ಲಿದ್ದರೆ.
12ಅಥವಾ ಅವನು ದೇವಭಯವಿಟ್ಟುಕೊಳ್ಳಲು ಆದೇಶಿಸಿದ್ದರೆ.
13ನೀವು ನೋಡಿದ್ದೀರಾ—ಒಂದು ವೇಳೆ ಅವನು (ತಡೆಯುವವನು) ನಿಷೇಧಿಸಿದ್ದರೆ ಮತ್ತು ವಿಮುಖನಾಗಿದ್ದರೆ.
14ಅಲ್ಲಾಹು ಅವನನ್ನು ನೋಡುತ್ತಿದ್ದಾನೆಂದು ಅವನಿಗೆ ತಿಳಿದಿಲ್ಲವೇ?
15ಅವನು ದೂರ ಸರಿಯದಿದ್ದರೆ ನಾವು ಖಂಡಿತವಾಗಿಯೂ ಅವನ ಮುಂದಲೆಯನ್ನು ಹಿಡಿದು ಎಳೆಯುವೆವು.
16ಸುಳ್ಳು ಹೇಳುವ, ಪಾಪವೆಸಗುವ ಮುಂದಲೆ.
17ಅವನು ತನ್ನ ಸಭಾ ಸದಸ್ಯರನ್ನು ಕರೆಯಲಿ.
18ನಾವು (ನರಕದಲ್ಲಿ) ಶಿಕ್ಷೆ ನೀಡುವ ದೇವದೂತರನ್ನು ಕರೆಯುವೆವು.
19ಎಚ್ಚರಾ! ಅವನ ಮಾತನ್ನು ಎಂದಿಗೂ ಕೇಳಬೇಡಿ. (ಅಲ್ಲಾಹನಿಗೆ) ಸಾಷ್ಟಾಂಗ ಮಾಡಿರಿ ಮತ್ತು ಅವನಿಗೆ ಸಮೀಪವಾಗಿರಿ.